Karnataka Rains: ಕರ್ನಾಟಕದ ಕರಾವಳಿ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ರೆಡ್​ ಅಲರ್ಟ್​, ಜುಲೈ 19ರವರೆಗೂ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಮಳೆನಾಡಿನಲ್ಲಿ ಧೋ ಎಂದು ಮಳೆ ಸುರಿಯುತ್ತಲೇ ಇದೆ. ಇದರ ಪ್ರಮಾಣ ಜುಲೈ 19ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್​ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ರೆಡ್​ ಅಲರ್ಟ್​, ಜುಲೈ 19ರವರೆಗೂ ಮಳೆ
ಮಳೆImage Credit source: Mathrubhumi English
Follow us
ನಯನಾ ರಾಜೀವ್
|

Updated on: Jul 15, 2024 | 7:42 AM

ಕರ್ನಾಟಕದಲ್ಲಿ ಕಳೆದ 15ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾಸನ, ಕೊಡಗು, ಮೈಸೂರಿನಲ್ಲಿ ಕೂಡ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಆಗುಂಬೆ, ಕುಮಟಾ, ಗೇರುಸೊಪ್ಪ, ಕದ್ರಾ, ಹೊನ್ನಾವರದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಕಾರವಾರ, ಶಿರಾಲಿ, ಗೋಕರ್ಣ, ಮಂಕಿ, ಸಿದ್ದಾಪುರ, ಕಮ್ಮರಡಿ, ನಾಪೊಕ್ಲು, ಜೋಯಿಡಾ, ಕುಂದಾಪುರ, ಸೋಮವಾರಪೇಟೆ, ಕೊಪ್ಪದಲ್ಲಿ ಮಳೆಯಾಗಿದೆ.

ಕೋಟ, ಲೋಂಡಾ, ಜಯಪುರ, ಧರ್ಮಸ್ಥಳ, ಯಲ್ಲಾಪುರ, ಭಾಗಮಂಡಲ, ಹುಂಚದಕಟ್ಟೆ, ಕಳಸ, ಸುಳ್ಯ, ಬನವಾಸಿ, ಕಿರವತ್ತಿ, ಹಳಿಯಾಳ, ಬೆಳ್ತಂಗಡಿ, ಮುಂಡಗೋಡು, ಕುಷ್ಟಗಿ, ಹಾರಂಗಿ, ಎನ್​ಆರ್​ಪುರ, ತ್ಯಾಗರ್ತಿ, ಬಾಳೆಹೊನ್ನೂರು, ಕಾರ್ಕಳ, ಉಪ್ಪಿನಂಗಡಿ, ಬೆಳಗಾವಿ, ಕೊಟ್ಟಿಗೆಹಾರ, ಮುಲ್ಕಿ, ಪುತ್ತೂರು, ಬಾದಾಮಿ, ಸಂಕೇಶ್ವರ, ಮುದಗಲ್, ರಾಣೆಬೆನ್ನೂರು, ಯಡವಾಡ, ಧಾರವಾಡ, ತರೀಕೆರೆ, ಕುಶಾಲನಗರ, ಸರಗೂರು, ಬಂಡೀಪುರ, ದೊಡ್ಡಬಳ್ಳಾಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​

ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದ್ದು ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ