Karnataka Rains: ಬೆಂಗಳೂರು ಸೇರಿ ಕರ್ನಾಟಕದ 19 ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್
ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುತ್ತಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬರಗಿ, ಗದಗ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಹಾವೇರಿ,ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು, ಸೆಪ್ಟೆಂಬರ್ 16: ಕರ್ನಾಟಕದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬರಗಿ, ಗದಗ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಹಾವೇರಿ,ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಕಕ್ಕೇರಿ, ಲಿಂಗಸುಗೂರು, ಇಳಕಲ್, ಹುಣಸಗಿಯಲ್ಲಿ ಭಾರಿ ಮಳೆಯಾಗಿದೆ. ಆಳಂದ, ಯಲಬುರ್ಗಾ, ಶೋರಾಪುರ, ಮಸ್ಕಿ, ಹುನಗುಂದ, ಗೌರಿಬಿದನೂರು, ತಾವರಗೇರಾ, ಶಿರಗುಪ್ಪ, ನಾರಾಯಣಪುರ, ಕೂಡಲಸಂಗಮ, ಕಾರವಾರ, ಶಾಹಪುರ, ನೆಲೋಗಿ, ನಲ್ವತವಾಡ, ಕುಷ್ಟಗಿಯಲ್ಲಿ ಮಳೆಯಾಗಿದೆ.
ಕೃಷ್ಣರಾಜಸಾಗರ, ಕೋಟಾ, ದೇವರಹಿಪ್ಪರಗಿ, ಬೆಳ್ತಂಗಡಿ, ಬಂಟವಾಳ, ಬಾದಾಮಿ, ಅಥಣಿ, ಆಗುಂಬೆ, ಯಡ್ರಾಮಿ, ಮಂಕಿ, ಕಮಲಾಪುರ, ಹೊನ್ನಾವರ, ಧರ್ಮಸ್ಥಳ, ಕ್ಯಾಸಲ್ರಾಕ್, ಬೀದರ್, ಭಾಲ್ಕಿ, ಬಸವನಬಾಗೇವಾಡಿ, ಅಫ್ಝಲ್ಪುರದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಮುಂದಿನ 2 ದಿನಗಳ ಕಾಲ ಕರ್ನಾಟಕದ ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:30 am, Tue, 16 September 25




