Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಇಂದು ಕರ್ನಾಟಕದ ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 3ರಿಂದ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಇಂದು ಕರ್ನಾಟಕದ ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Apr 01, 2025 | 7:38 AM

ಬೆಂಗಳೂರು, ಏಪ್ರಿಲ್ 1: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಹಿತವಾದ ಗಾಳಿ ಬೀಸುತ್ತಿದೆ. ಏಪ್ರಿಲ್​ 3ರಿಂದ ಮಳೆ(Rain) ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.

ಏಪ್ರಿಲ್ 3ರಂದು ತುಮಕೂರು, ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಳಿಯಾಳ, ಧಾರವಾಡ, ಹುನಗುಂದ, ಕಿತ್ತೂರು, ಹುಬ್ಬಳ್ಳಿಯಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 14.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
Image
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
Image
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜೋರು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೊಪ್ಪಳದಲ್ಲಿ 34.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ