Karnataka Weather: ಕರ್ನಾಟಕದಾದ್ಯಂತ ಒಣಹವೆ, ಕರಾವಳಿಯಲ್ಲಿ ಉಷ್ಣ ಅಲೆ

ಕರ್ನಾಟಕದ ಕರಾವಳಿಯಲ್ಲಿ ಉಷ್ಣ ಅಲೆ ಇರಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹೊನ್ನಾವರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕದಾದ್ಯಂತ ಒಣಹವೆ, ಕರಾವಳಿಯಲ್ಲಿ ಉಷ್ಣ ಅಲೆ
ಉಷ್ಣ ಅಲೆ
Image Credit source: NDTV

Updated on: Mar 01, 2025 | 7:22 AM

ಬೆಂಗಳೂರು, ಮಾರ್ಚ್​ 1:   ಕರ್ನಾಟಕದ ಕರಾವಳಿಯಲ್ಲಿ ಉಷ್ಣ ಅಲೆ ಇರಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹೊನ್ನಾವರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಾರವಾರ ಹಾಗೂ ಪಣಂಬೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಕರಾವಳಿ ಕರ್ನಾಟಕದ ಮಂಗಳೂರು, ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನಲ್ಲಿ ಗರಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ.

ಗರಿಷ್ಠ ತಾಪಮಾನ ಕರಾವಳಿಯಲ್ಲಿ 36-37 ಡಿಗ್ರಿ ಸೆಲ್ಸಿಯಸ್​ನಷ್ಟಿದೆ, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಮತ್ತ ಹಾವೇರಿಯಲ್ಲಿ 32-34 ಡಿಗ್ರಿ ಸೆಲ್ಸಿಯಸ್​, ಬಾಗಲಕೋಟೆ, ಕಲಬುರಗಿಯಲ್ಲಿ 35-37 ಡಿಗ್ರಿ ಸೆಲ್ಸಿಯಸ್, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮಡಿಕೇರಿ, ಶಿವಮೊಗ್ಗ ಮತ್ತು ಮೈಸೂರು, ಆಗುಂಬೆಯಲ್ಲಿ 35 ಡಿಗ್ರಿ ಸೆಲ್ಸಿಯಸ್​ನಷ್ಟಿದೆ.

ಮತ್ತಷ್ಟು ಓದಿ: Karnataka Weather: ಮುಂದಿನ ಒಂದು ವಾರ ಕರ್ನಾಟಕದ ಕರಾವಳಿಯಲ್ಲಿ ಉಷ್ಣ ಅಲೆ

ಕಳೆದ 24 ಗಂಟೆಗಳಲ್ಲಿ ಮಡಿಕೇರಿಯಲ್ಲಿ -2.8 ಡಿಗ್ರಿ ಸೆಲ್ಸಿಯಸ್​ನಷ್ಟು ಕನಿಷ್ಠ ತಾಪಮಾನದಲ್ಲಿ ಕುಸಿತ ಕಂಡಿದೆ, ಕರಾಳಿಯಲ್ಲಿ ಕನಿಷ್ಠ ತಾಪಮಾನ 22-23 ಡಿಗ್ರಿ ಸೆಲ್ಸಿಯಸ್​ನಷ್ಟಿದೆ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ ಧಾರವಾಡದಲ್ಲಿ 19-22 ಡಿಗ್ರಿ ಸೆಲ್ಸಿಯಸ್​ನಷ್ಟಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ