Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಸಾಧಾರಣ ಮಳೆಯಾಗುವ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ ಉರಿ ಬಿಸಿಲಿದ್ದರೆ ಸಂಜೆಯಾಗುತ್ತಿದ್ದಂತೆ ಚಳಿಗಾಳಿ ಬೀಸುತ್ತಿದೆ. ಹವಾಮಾನ ಇಲಾಖೆಯು ಬೆಂಗಳೂರಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಮಂಗಳೂರು ಸೇರಿದಂತೆ ಹಲವೆಡೆ ಒಣಹವೆ ಹೆಚ್ಚಲಿದೆ.

Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಸಾಧಾರಣ ಮಳೆಯಾಗುವ ಮುನ್ಸೂಚನೆ
ಹವಾಮಾನImage Credit source: Skymet Weather
Follow us
ನಯನಾ ರಾಜೀವ್
|

Updated on: Feb 27, 2024 | 7:39 AM

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಗ್ರಾಮಾಂತರ ಹಾಗೂ ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆ ವಿಪರೀತ ಬಿಸಿಲು ರಾತ್ರಿ ವೇಳೆ ಚಳಿ ಬೀಳುತ್ತಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಶೀತ ಗಾಳಿ, 5 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ದೆಹಲಿ -ಎನ್​ಸಿಆರ್​ನಲ್ಲಿ ಮಳೆ

ಮಂಗಳವಾರ ಬೆಳಗ್ಗೆ ದೆಹಲಿ ಎನ್‌ಸಿಆರ್‌ನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ. ಗಾಳಿಯೊಂದಿಗೆ ತುಂತುರು ಮಳೆಯಿಂದಾಗಿ ತಾಪಮಾನ ಕಡಿಮೆಯಾಗಿದೆ. ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ಆಲಿಕಲ್ಲು ಮಳೆಯಾಗಿದೆ.ಆದರೆ ಜಮ್ಮು ಮತ್ತು ಕಾಶ್ಮೀರ, ಲಡಾಖ್​, ಬಾಲ್ಟಿಸ್ತಾನ್, ಮುಜಾಫರಾಬಾದ್, ಹಿಮಾಚಲ ಪ್ರದೇಶದಲ್ಲಿ ಹಗುರ ಮಳೆಯಾಗುತ್ತಿದೆ. ನಾಗಾಲೆಂಡ್​, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ, ಮೇಘಾಲಯ, ಕರಾವಳಿ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿನಲ್ಲೂ ಮಳೆಯಾಗುತ್ತಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ