ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಗ್ರಾಮಾಂತರ ಹಾಗೂ ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆ ವಿಪರೀತ ಬಿಸಿಲು ರಾತ್ರಿ ವೇಳೆ ಚಳಿ ಬೀಳುತ್ತಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಶೀತ ಗಾಳಿ, 5 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ದೆಹಲಿ -ಎನ್ಸಿಆರ್ನಲ್ಲಿ ಮಳೆ
ಮಂಗಳವಾರ ಬೆಳಗ್ಗೆ ದೆಹಲಿ ಎನ್‌ಸಿಆರ್‌ನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ. ಗಾಳಿಯೊಂದಿಗೆ ತುಂತುರು ಮಳೆಯಿಂದಾಗಿ ತಾಪಮಾನ ಕಡಿಮೆಯಾಗಿದೆ. ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ಆಲಿಕಲ್ಲು ಮಳೆಯಾಗಿದೆ.ಆದರೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಬಾಲ್ಟಿಸ್ತಾನ್, ಮುಜಾಫರಾಬಾದ್, ಹಿಮಾಚಲ ಪ್ರದೇಶದಲ್ಲಿ ಹಗುರ ಮಳೆಯಾಗುತ್ತಿದೆ.
ನಾಗಾಲೆಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ, ಮೇಘಾಲಯ, ಕರಾವಳಿ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿನಲ್ಲೂ ಮಳೆಯಾಗುತ್ತಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ