Karnataka Weather: ಚಂಡಮಾರುತ: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು, 15 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲಾಗುತ್ತಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Weather: ಚಂಡಮಾರುತ: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು, 15 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಮಳೆ
Image Credit source: PTI

Updated on: Jan 14, 2025 | 7:24 AM

ಶ್ರೀಲಂಕಾದ ಪೂರ್ವ ಕರಾವಳಿ ಹಾಗೂ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯುಂಟಾಗಿದ್ದು, ಕರ್ನಾಟಕ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ.

ವಿಜಯಪುರದಲ್ಲಿ 14.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಳಿಯ ಪ್ರಮಾಣವೂ ಕೊಂಚ ಕಡಿಮೆಯಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜ.14ರಿಂದ ಮಳೆ

ಹೊನ್ನಾವರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us