Karnataka Rains: ಇಂದಿನಿಂದ ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ, ರೆಡ್​ ಅಲರ್ಟ್​

ಕರ್ನಾಟಕದಲ್ಲಿ ಮುಂಗಾರು ಚುರುಕಾಗುತ್ತಿದೆ, ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದ್ದು, ರೆಡ್​ ಅಲರ್ಟ್​ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ ಒಂದು ವಾರ ಕಳೆದಿದೆ ಆದರೆ ಹೇಳುವಷ್ಟು ಎಲ್ಲೂ ಮಳೆಯಾಗಿಲ್ಲ. ಆದರೆ ಇಂದಿನಿಂದ ಮಳೆ ವೇಗ ಪಡೆಯಲಿದೆ ಎನ್ನಲಾಗಿದೆ.

Karnataka Rains: ಇಂದಿನಿಂದ ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ, ರೆಡ್​ ಅಲರ್ಟ್​
ಮಳೆ
Follow us
ನಯನಾ ರಾಜೀವ್
|

Updated on: Jun 09, 2024 | 8:33 AM

ಇಂದಿನಿಂದ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದ್ದು ರೆಡ್​ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ,ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಆರೆಂಜ್​ ಹಾಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್ಗ, ಹಾಸನ, ತುಮಕೂರು, ವಿಜಯಪುರ, ಮೈಸೂರು, ರಾಮನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ. ತಾಳಿಕೋಟೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಎಚ್​ಡಿ ಕೋಟೆ, ಗೋಕಾಕ, ಬೈಲಹೊಂಗಲ, ಬಾದಾಮಿ, ಶಿವಮೊಗ್ಗ, ಆಗುಂಬೆ, ಮಂಕಿ, ಚಿಂತಾಮಣಿ, ನಾಯಕನಹಟ್ಟಿ, ನರಗುಂದ, ಹುಣಸಗಿ, ಹೊನ್ನಾಳಿ, ಸಿದ್ದಾಪುರ, ಲೋಕಾಪುರ, ಆಲಮಟ್ಟಿ, ಹಿಡಕಲ್ ಅಣೆಕಟ್ಟು, ಬೇಗೂರು, ದೇವನಹಳ್ಳಿ, ಮಾಗಡಿ, ಹೊಸಕೋಟೆಯಲ್ಲಿ ಮಳೆಯಾಗಿದೆ.

ಪರಶುರಾಂಪುರ, ಮೂರ್ನಾಡು, ಗುಂಡ್ಲುಪೇಟೆ, ಅಗ್ರಹಾರ, ಕೊಟ್ಟೂರು, ಕಿರವತ್ತಿ, ಹಾವೇರಿ, ನಿಪ್ಪಾಣಿ, ಬಾಗಲಕೋಟೆ, ಬೇವೂರು, ಕೋಲಾರ, ದೊಡ್ಡಬಳ್ಳಾಪುರ, ರಾಮನಗರ, ನಾರಾಯಣಪುರ, ಮಧುಗಿರಿ, ಹಗರಿಬೊಮ್ಮನಹಳ್ಳಿ, ಹಡಗಲಿ, ಶ್ರೀರಂಗಪಟ್ಟಣ, ಮಸ್ಕಿ, ಮುಂಡಗೋಡು, ಕುಶಾಲನಗರ, ಕಮ್ಮರಡಿ, ಕಂಪ್ಲಿ, ಬೆಳ್ಳೂರು, ತಿಪಟೂರು, ಮದ್ದೂರು, ಲಿಂಗಸುಗೂರು, ಸಂಕೇಶ್ವರ, ಚಿಂಚೋಳಿ, ಕಮಲಾಪುರ, ಸೇಡಬಾಳ, ಮುನಿರಾಬಾದ್, , ಇಳಕಲ್, ಧಾರವಾಡ, ಕೆಂಭಾವಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಜೂನ್ 13ರ ವರೆಗೂ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 35.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ