Karnataka Weather: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಅಲ್ಲಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದು ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಮಳೆ
Image Credit source: PTI

Updated on: Apr 06, 2025 | 7:51 AM

ಬೆಂಗಳೂರು, ಏಪ್ರಿಲ್ 06: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೇಗೂರು, ಕೃಷ್ಣರಾಜಸಾಗರ, ಗುಂಡ್ಲುಪೇಟೆಯಲ್ಲಿ ಭಾರಿ ಮಳೆಯಾಗಿದೆ. ಬಂಡೀಪುರ, ಭಾಗಮಂಡಲ, ಕೃಷ್ಣರಾಜಪೇಟೆ, ಎಚ್​ಡಿ ಕೋಟೆ, ಮಂಡ್ಯ, ಕೋಲಾರ, ಶ್ರೀರಂಗಪಟ್ಟಣ, ರಾಯಲ್ಪಾಡು, ಎಂಎಂ ಹಿಲ್ಸ್​, ಶಿಗ್ಗಾಂವ್, ಹಾವೇರಿ, ಹುಬ್ಬಳ್ಳಿ, ಕೆಆರ್ ನಗರ, ಚನ್ನರಾಯಪಟ್ಟಣ ಹಾಗೂ ಬೆಂಗಳೂರಿನ ಕೆಲ ಭಾಗಗಳಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Rains: ಇಂದಿನಿಂದ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us