AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಉತ್ತರ ಕರ್ನಾಟಕದ ಕೆಲವೆಡೆ ಶೀತ ವಾತಾವರಣ, ಬೆಂಗಳೂರಲ್ಲಿ ಚಳಿಯೂ ಇಲ್ಲ, ಮಳೆಯೂ ಇಲ್ಲ

ಉತ್ತರ ಕರ್ನಾಟಕ, ಮಲೆನಾಡಿನ ಕೆಲವು ಭಾಗಗಳಲ್ಲಿ ಶೀತ ವಾತಾವರಣ ಮುಂದುವರೆದಿದೆ. ಬೆಂಗಳೂರಲ್ಲಿ ಚಳಿಯೂ ಇಲ್ಲ, ಮಳೆಯೂ ಇಲ್ಲ. ಬೀದರ್, ಕಲಬುರಗಿ, ವಿಜಯಪುರದಲ್ಲಿ ತುಂಬಾ ಚಳಿ ಇದೆ. ಡಿಸೆಂಬರ್ 24ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.

Karnataka Weather: ಉತ್ತರ ಕರ್ನಾಟಕದ ಕೆಲವೆಡೆ ಶೀತ ವಾತಾವರಣ, ಬೆಂಗಳೂರಲ್ಲಿ ಚಳಿಯೂ ಇಲ್ಲ, ಮಳೆಯೂ ಇಲ್ಲ
Cold (5)Image Credit source: PTI
ನಯನಾ ರಾಜೀವ್
|

Updated on: Dec 19, 2024 | 7:39 AM

Share

ಉತ್ತರ ಕರ್ನಾಟಕ, ಮಲೆನಾಡಿನ ಕೆಲವು ಭಾಗಗಳಲ್ಲಿ ಶೀತ ವಾತಾವರಣ ಮುಂದುವರೆದಿದೆ. ಬೆಂಗಳೂರಲ್ಲಿ ಚಳಿಯೂ ಇಲ್ಲ, ಮಳೆಯೂ ಇಲ್ಲ. ಬೀದರ್, ಕಲಬುರಗಿ, ವಿಜಯಪುರದಲ್ಲಿ ತುಂಬಾ ಚಳಿ ಇದೆ. ಡಿಸೆಂಬರ್ 24ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್​ನಲ್ಲಿ 8.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಚಳಿ ಕಡಿಮೆಯಾಗಿದೆ. ಎಚ್​ಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಐದು ಜಿಲ್ಲೆಗಳಲ್ಲಿ ಶೀತ ಗಾಳಿ, ಕೆಲವೆಡೆ ಡಿ.20ರಿಂದ ಮಳೆ

ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 9.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 8.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ