ಉತ್ತರ ಕರ್ನಾಟಕ, ಮಲೆನಾಡಿನ ಕೆಲವು ಭಾಗಗಳಲ್ಲಿ ಶೀತ ವಾತಾವರಣ ಮುಂದುವರೆದಿದೆ. ಬೆಂಗಳೂರಲ್ಲಿ ಚಳಿಯೂ ಇಲ್ಲ, ಮಳೆಯೂ ಇಲ್ಲ. ಬೀದರ್, ಕಲಬುರಗಿ, ವಿಜಯಪುರದಲ್ಲಿ ತುಂಬಾ ಚಳಿ ಇದೆ. ಡಿಸೆಂಬರ್ 24ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.
ಬೀದರ್ನಲ್ಲಿ 8.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಚಳಿ ಕಡಿಮೆಯಾಗಿದೆ. ಎಚ್ಎಎಲ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಐದು ಜಿಲ್ಲೆಗಳಲ್ಲಿ ಶೀತ ಗಾಳಿ, ಕೆಲವೆಡೆ ಡಿ.20ರಿಂದ ಮಳೆ
ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 9.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 8.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ