Karnataka Weather: ಬೆಂಗಳೂರು, ಹಾಸನ, ಚಿಕ್ಕಮಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Weather: ಬೆಂಗಳೂರು, ಹಾಸನ, ಚಿಕ್ಕಮಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಳೆ
Image Credit source: Scroll.in

Updated on: Mar 21, 2024 | 7:35 AM

ಬೆಂಗಳೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಸೇರಿದಂತೆ ಕರ್ನಾಟಕದ 25ಕ್ಕೂ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್​ 25ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೊಪ್ಪಳದಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಚಾಮರಾಜನಗರದಲ್ಲಿ 18.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಕೊಡಗು ಸೇರಿ ಕೆಲವೆಡೆ ಸುರಿದ ಮಳೆ, ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಮುನ್ಸೂಚನೆ

ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 7:35 am, Thu, 21 March 24

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us