AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರಿನಲ್ಲಿ ಮೇ​ 19ರಿಂದ 2 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

Karnataka Rain: ಬೆಂಗಳೂರಿನಲ್ಲಿ ಮೇ​ 19ರಿಂದ 2 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​
ಮಳೆImage Credit source: Indian Express
ನಯನಾ ರಾಜೀವ್
|

Updated on:May 16, 2024 | 7:32 AM

Share

ಬೆಂಗಳೂರಿನಲ್ಲಿ ಮೇ 19ರಿಂದ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

ಸಿದ್ದಾಪುರ, ಬೇವೂರು, ಹುಕ್ಕೇರಿ, ಹಿಡಕಲ್ ಡ್ಯಾಂ, ತರೀಕೆರೆ, ಕುಷ್ಟಗಿ, ರಬಕವಿ, ಲೋಂಡಾ, ಯಡ್ರಾಮಿ, ಚಿತ್ತಾಪುರ, ನೆಲೋಗಿ, ಬೀದರ್, ಬಿಳಗಿ, ಸಿಂದಗಿ, ಗೋಕಾಕ್, ಇಂಡಿ, ಚಿಂಚೋಳಿ, ಗಂಗಾವತಿ, ಬಾಳೆಹೊನ್ನೂರು, ಶಿವಮೊಗ್ಗ, ಬನವಾಸಿ, ಬೈಲಹೊಂಗಲ, ಮುರಗೋಡ, ಕಕ್ಕೇರಿ, ಮಸ್ಕಿ, ಶೋರಾಪುರ, ದೇವದುರ್ಗ, ಕೆಂಭಾವಿ, ಸಿಂಧನೂರು, ಕಲಘಟಗಿ, ಕೂಡಲಸಂಗಮ, ನರಗುಂದ, ಕಮ್ಮರಡಿ, ಕೊಪ್ಪ, ತಿಪಟೂರಿನಲ್ಲಿ ಮಳೆಯಾಗಿದೆ.

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು,ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 39.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ವಿಪರೀತ ಮಳೆ

ಎಚ್​ಎಎಲ್​ನಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ 26.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:30 am, Thu, 16 May 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು