ಬೆಂಗಳೂರಿನಲ್ಲಿ ಮೇ 19ರಿಂದ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ಸಿದ್ದಾಪುರ, ಬೇವೂರು, ಹುಕ್ಕೇರಿ, ಹಿಡಕಲ್ ಡ್ಯಾಂ, ತರೀಕೆರೆ, ಕುಷ್ಟಗಿ, ರಬಕವಿ, ಲೋಂಡಾ, ಯಡ್ರಾಮಿ, ಚಿತ್ತಾಪುರ, ನೆಲೋಗಿ, ಬೀದರ್, ಬಿಳಗಿ, ಸಿಂದಗಿ, ಗೋಕಾಕ್, ಇಂಡಿ, ಚಿಂಚೋಳಿ, ಗಂಗಾವತಿ, ಬಾಳೆಹೊನ್ನೂರು, ಶಿವಮೊಗ್ಗ, ಬನವಾಸಿ, ಬೈಲಹೊಂಗಲ, ಮುರಗೋಡ, ಕಕ್ಕೇರಿ, ಮಸ್ಕಿ, ಶೋರಾಪುರ, ದೇವದುರ್ಗ, ಕೆಂಭಾವಿ, ಸಿಂಧನೂರು, ಕಲಘಟಗಿ, ಕೂಡಲಸಂಗಮ, ನರಗುಂದ, ಕಮ್ಮರಡಿ, ಕೊಪ್ಪ, ತಿಪಟೂರಿನಲ್ಲಿ ಮಳೆಯಾಗಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು,ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕಲಬುರಗಿಯಲ್ಲಿ 39.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ವಿಪರೀತ ಮಳೆ
ಎಚ್ಎಎಲ್ನಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 26.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:30 am, Thu, 16 May 24