Karnataka Rain: ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​ ಘೋಷಣೆ

|

Updated on: Apr 24, 2024 | 7:32 AM

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯಪುರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: The Hindu
Follow us on

ಕರ್ನಾಟಕ(Karnataka)ದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ(Rain)ಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್​, ಇನ್ನೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯಪುರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.
ದಾವಣಗೆರೆ, ರೋಣ, ಆಲಮಟ್ಟಿ, ಹಾವೇರಿ, ಹುಬ್ಬಳ್ಳಿ, ಸವಣೂರು, ಔರಾದ್, ಯಲಬುರ್ಗಾ, ದೇವರಹಿಪ್ಪರಗಿ, ನಾರಾಯಣಪುರ, ಬೀದರ್, ಶೋರಾಪುರ್, ಲಕ್ಷ್ಮೇಶ್ವರ, ಕಮಲಾಪುರ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 37.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡು, ಕರಾವಳಿಯಲ್ಲಿ ಇಂದು ಮಳೆ ಸಾಧ್ಯತೆ

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಧಾರವಾಡದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ