AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಹವಾಮಾನ ಹೇಗಿದೆ? ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಒಣಹವೆ?

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರದಲ್ಲಿ ಇಂದು ಮಳೆಯಾಗಲಿದೆ.

Karnataka Weather: ಕರ್ನಾಟಕದ ಹವಾಮಾನ ಹೇಗಿದೆ? ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಒಣಹವೆ?
ಮಳೆ Image Credit source: PTI
ನಯನಾ ರಾಜೀವ್
|

Updated on: Mar 24, 2025 | 7:17 AM

Share

ಬೆಂಗಳೂರು, ಮಾರ್ಚ್​ 24: ಕರ್ನಾಟಕದ ಅಲ್ಲಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರದಲ್ಲಿ ಇಂದು ಮಳೆಯಾಗಲಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಹಾವೇರಿ, ಗದಗ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಮದ್ದೂರು, ಯಲಹಂಕ, ಮಾಗಡಿ, ಬೆಂಗಳೂರು ಏರ್​ಪೋರ್ಟ್​, ಮಾಗಡಿ, ಚಿಂತಾಮಣಿ, ಸರಗೂರು, ನಾಗಮಂಗಲ, ರಾಯಲ್ಪಾಡು, ಬೇಲೂರು, ಜಿಕೆವಿಕೆ, ಎಲೆಕ್ಟ್ರಾನಿಕ್​ಸಿಟಿ, ಎಂಎಂ ಹಿಲ್ಸ್​, ಹೆಸರಘಟ್ಟ, ನಾಪೋಕ್ಲುವಿನಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಉತ್ತರ ಕರ್ನಾಟಕಕ್ಕೆ ಬಿಸಿಲಾಘಾತ: ರಾಜ್ಯ ವಿಪತ್ತು ಎಂದು ಘೋಷಿಸಲು ಆಗ್ರಹ
Image
ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ
Image
ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Image
ಕರ್ನಾಟಕದ ಹಲವೆಡೆ ಭಾರಿ ಮಳೆ: ಮಂಗಳೂರಿನಿಂದ ವಿಮಾನಗಳು ಡೈವರ್ಟ್‌

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ

ಹೊನ್ನಾವರದಲ್ಲಿ34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ