Karnataka Weather: ಶಿವಮೊಗ್ಗ, ಕೊಡಗು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಮಳೆ

ಕರ್ನಾಟಕದ ಹಲವೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

Karnataka Weather: ಶಿವಮೊಗ್ಗ, ಕೊಡಗು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಮಳೆ
ಮಳೆ
Image Credit source: PTI

Updated on: Mar 26, 2025 | 7:17 AM

ಬೆಂಗಳೂರು, ಮಾರ್ಚ್​ 26: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಇಂದು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಅಫ್ಜಲ್​ಪುರ್, ಲಿಂಗಸುಗೂರು, ಸಾಗರ, ಇಂಡಿ, ಬೆಳ್ಳೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 19.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 21.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಉತ್ತರ ಕರ್ನಾಟಕಕ್ಕೆ ಬಿಸಿಲಾಘಾತ: ರಾಜ್ಯ ವಿಪತ್ತು ಎಂದು ಘೋಷಿಸಲು ಆಗ್ರಹ
ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ
ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕದ ಹಲವೆಡೆ ಭಾರಿ ಮಳೆ: ಮಂಗಳೂರಿನಿಂದ ವಿಮಾನಗಳು ಡೈವರ್ಟ್‌

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ ಮುನ್ಸೂಚನೆ

ಬೀದರ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us