AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ರಾಜ್ಯದೆಲ್ಲೆಡೆ ಉಷ್ಣಾಂಶ ಹೆಚ್ಚಳ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಹೊತ್ತಿಗೆ ಶುಭ್ರ ಆಕಾಶವಿರಲಿದೆ, ರಾಜ್ಯದೆಲ್ಲೆಡೆ ಉಷ್ಣಾಂಶ ಸ್ವಲ್ಪ ಹೆಚ್ಚಾಗಿದೆ. ಫೆಬ್ರವರಿ ಆರಂಭದಲ್ಲೇ ಮುಂದಿನ ದಿನಗಳಲ್ಲಿ ಹವಾಮಾನ ಹೇಗಿರಬಹುದು ಎನ್ನುವ ಅಂದಾಜು ಸಿಕ್ಕಂತಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡು ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಚಳಿ ಇದೆ.

Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ರಾಜ್ಯದೆಲ್ಲೆಡೆ ಉಷ್ಣಾಂಶ ಹೆಚ್ಚಳ
ಹವಾಮಾನImage Credit source: TravelandHappines
ನಯನಾ ರಾಜೀವ್
|

Updated on: Feb 02, 2024 | 7:39 AM

Share

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಹೊತ್ತಿಗೆ ಶುಭ್ರ ಆಕಾಶವಿರಲಿದೆ, ರಾಜ್ಯದೆಲ್ಲೆಡೆ ಉಷ್ಣಾಂಶ ಸ್ವಲ್ಪ ಹೆಚ್ಚಾಗಿದೆ. ಫೆಬ್ರವರಿ ಆರಂಭದಲ್ಲೇ ಮುಂದಿನ ದಿನಗಳಲ್ಲಿ ಹವಾಮಾನ ಹೇಗಿರಬಹುದು ಎನ್ನುವ ಅಂದಾಜು ಸಿಕ್ಕಂತಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡು ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಚಳಿ ಇದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ 11.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಹರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಜನವರಿ ತಿಂಗಳು ಮುಗಿಯುತ್ತಿದ್ದಂತೆ ಕಡಿಮೆಯಾಯ್ತು ಚಳಿ, ಹೆಚ್ಚಿದ ಉಷ್ಣಾಂಶ

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ