AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕಲಬುರಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ದಾಖಲು

ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ, ಕೆಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್​ಗೆ ತಲುಪಿದೆ, ಬೆಂಗಳೂರು ಸೇರಿದಂತೆ ಬಹಳಷ್ಟು ಕಡೆ ನೀರಿಲ್ಲದೆ ಜನರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Karnataka Weather: ಕಲಬುರಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ದಾಖಲು
ಬೇಸಿಗೆ Image Credit source: Penn Live
ನಯನಾ ರಾಜೀವ್
|

Updated on: Mar 11, 2024 | 7:45 AM

Share

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಸೆಕೆ ಹೆಚ್ಚಾಗುತ್ತಿದ್ದು, ನೀರಿಗೆ ಹಾಹಾಕಾರ ಶುರುವಾಗಿದೆ. ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಉಷ್ಣಾಂಶ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: India Weather: ಮುಂದಿನ 24 ಗಂಟೆಗಳಲ್ಲಿ ಈ 8 ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ

ಹಾವೇರಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?