Karnataka Weather: ಕಲಬುರ್ಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ರಾಜ್ಯಾದ್ಯಂತ ಒಣಹವಚೆ ಮುಂದುವರೆದಿದೆ. ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕಲಬುರ್ಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲು
ಬೇಸಿಗೆ
Image Credit source: Native Planet

Updated on: Mar 03, 2024 | 8:14 AM

ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ, ಕಲಬುರ್ಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ.

ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 15.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಮಂಡ್ಯದಲ್ಲಿ ವಿಪರೀತ ಚಳಿ

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 36.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಾವೇರಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us