ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ ಭಾರಿ ಮಳೆಯಾಗಲಿದ್ದು, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಕೋಟ, ಹೊನ್ನಾವರ, ಮಂಕಿ, ಮಂಗಳೂರು, ಕುಮಟಾ, ಉಡುಪಿ, ಕುಂದಾಪುರ, ಕಾರವಾರ, ಯಲ್ಲಾಪುರ, ಕಮ್ಮರಡಿ, ಹುಂಚದಕಟ್ಟೆ, ಬಾಳೆಹೊನ್ನೂರು, ಜಯಪುರ, ಪುತ್ತೂರು, ಕಳಸದಲ್ಲಿ ಮಳೆಯಾಗಿದೆ.
ವಿಜಯಪುಯರದಲ್ಲಿ 13.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಕೆಲವು ಕಡೆಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಮಳೆ ಸಾಧ್ಯತೆ
ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:37 am, Fri, 5 January 24