Karnataka Weather: ಕಲಬುರಗಿ, ಬಾಗಲಕೋಟೆಯಲ್ಲಿ ಉಷ್ಣ ಅಲೆ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಉಷ್ಣಅಲೆ ಇರಲಿದ್ದು, ಒಣದೆರೆಡು ದಿನಗಳ ಬಳಿಕ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಬೆಂಗಳೂರು, ಮಾರ್ಚ್ 16: ಕರ್ನಾಟಕದ ಉತ್ತರ ಒಳನಾಡಿನ ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ, ಬೆಂಗಳೂರು ವಿಮಾನ ನಿಲ್ದಾಣ, ಚಿಂತಾಮಣಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕಲಬುರಗಿ, ಹಾಸನ, ಮಂಡ್ಯ ಮತ್ತು ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿದೆ.
ಎಚ್ಎಎಲ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ:Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಈ ವಾರಾಂತ್ಯ ಮಳೆ
ಹೊನ್ನಾವರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬಾಗಲಕೋಟೆಯಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ