Karnataka Weather: ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ, ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ

Bangalore Weather: ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹಳಿಯಾಳ, ಶಿರಸಿ ಮತ್ತಿತರ ಕಡೆಗಳಲ್ಲಿ ಗುಡುಗು-ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ. ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿಲ್ಲ.

  • TV9 Web Team
  • Published On - 14:35 PM, 19 Feb 2021
Karnataka Weather: ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ, ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಭಾರತ ಹವಾಮಾನ ಇಲಾಖೆ (India Meteorological Department) ಪ್ರಕಾರ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ಮಧ್ಯ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ವಾತಾವರಣದಲ್ಲಿ ಏರುಪೇರಾಗುವ ನಿರೀಕ್ಷೆಯಿದೆ. ಮುಂದಿನ 24 ಗಂಟೆಗಳಲ್ಲಿ ವಿದರ್ಭ, ಛತ್ತೀಸಗಡ​, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೇ ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಶುಕ್ರವಾರ ಮತ್ತು ಶನಿವಾರ ಬೆಳಿಗ್ಗೆ ಪಂಜಾಬ್​ನ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜನ್ನು ಕಾಣಬಹುದು. ಫೆಬ್ರವರಿ 20 ರ ಬೆಳಿಗ್ಗೆ ಹರಿಯಾಣ, ಚಂಡೀಗಡ ಮತ್ತು ದೆಹಲಿಯ ಹಲವು ಸ್ಥಳಗಳಲ್ಲಿ ದಟ್ಟವಾದ ಮಂಜು ಸುರಿಯುವ ನಿರೀಕ್ಷೆಯಿದೆ. ಮುಂದಿನ 3-4 ದಿನಗಳಲ್ಲಿ ಉತ್ತರ ಭಾರತದ ಬಯಲು ಪ್ರದೇಶಗಳಲ್ಲಿ ಬೆಚ್ಚಗಿನ ತಾಪಮಾನ ಮುಂದುವರಿಯುವ ನಿರೀಕ್ಷೆಯಿದೆ.

ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ..
ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮೊದಲೇ ಮುನ್ಸೂಚನೆ ನೀಡಿತ್ತು. ಕೇರಳದಿಂದ ಮಹಾರಾಷ್ಟ್ರದವರೆಗೂ ವಾಯುಭಾರ ಕುಸಿತದ ಪರಿಣಾಮವಿರುವುದರಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಮಹಾರಾಷ್ಟ್ರದ ಗಡಿಭಾಗದ ರಾಜ್ಯದ ಜಿಲ್ಲೆಗಳಾದ ಬಾಗಲಕೋಟೆ, ವಿಜಾಪುರ ಮತ್ತಿತರ ಕಡೆಗಳಲ್ಲಿ ಮೋಡ ಕವಿದ ವಾತಾ ವರಣ ಹೆಚ್ಚಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹಳಿಯಾಳ, ಶಿರಸಿ ಮತ್ತಿತರ ಕಡೆಗಳಲ್ಲಿ ಗುಡುಗು-ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ. ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿಲ್ಲ. ಆದರೆ, ಕೆಲವೆಡೆ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ವಿರಳವಾಗಿದ್ದು, ಬೆಂಗಳೂರಿನ ಮೇಲೆ ಇದರ ಪರಿಣಾಮ ತೀರ ಕಡಿಮೆ ಎಂದು ವರದಿಯಾಗಿದೆ.

ಇತರ ರಾಜ್ಯಗಳ ಹವಾಮಾನ ವರದಿ..
ಅರುಣಾಚಲ ಪ್ರದೇಶದಲ್ಲಿ ತುಂತುರು ಹಿಮ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಛತ್ತೀಸ್​ಗಡ್, ಜಾರ್ಖಂಡ್, ಒಡಿಶಾ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಲಡಾಖ್‌ನಲ್ಲಿ ತುಂತುರು ಹಿಮ, ಗುಡುಗು ಸಹಿತ ಮಳೆಯಾಗಬಹುದು. ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಅರುಣಾಚಲ ಪ್ರದೇಶದಲ್ಲಿ ಹಿಮ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Weather Alert: ಫೆಬ್ರವರಿ 17ರಿಂದ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಮಳೆ ಸಾಧ್ಯತೆ