Karnataka Weather: ಮೇ 6ರ ವರೆಗೆ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮೇ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳ ಹೆಚ್ಚಿರುವುದರಿಂದ ಚರ್ಮ ಸಂಬಂಧಿ ಕಾಯಿಲೆಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯಪುರ, ಕಲಬುರಗಿ, ಹಾವೇರಿ, ಬೀದರ್, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.

Karnataka Weather: ಮೇ 6ರ ವರೆಗೆ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ  ಮಳೆ
ಮಳೆ
Image Credit source: PTI

Updated on: Apr 30, 2025 | 7:18 AM

ಬೆಂಗಳೂರು, ಏಪ್ರಿಲ್ 30: ಇಂದು ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯಪುರ, ಕಲಬುರಗಿ, ಹಾವೇರಿ, ಬೀದರ್, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.

ನಾಪೋಕ್ಲು, ಚಾಮರಾಜನಗರ, ಕಳಸ, ಕುಶಾಲನಗರ, ಶೃಂಗೇರಿ, ಮಾಣಿ, ಕಾರ್ಕಳದಲ್ಲಿ ಮಳೆಯಾಗಿದೆ. ಬೀದರ್​ನಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: Karnataka Weather: ಇಂದು ಬೆಂಗಳೂರು ಸೇರಿ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 35.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us