Karnataka Weather: ಮಾರ್ಚ್​ 12ರಿಂದ 3 ದಿನಗಳ ಕಾಲ ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಲ್ಲಿ ಮುಂದಿನ ವಾರ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

Karnataka Weather: ಮಾರ್ಚ್​ 12ರಿಂದ 3 ದಿನಗಳ ಕಾಲ ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಮಳೆ
ಮಳೆ
Image Credit source: The Conversation

Updated on: Mar 08, 2025 | 7:29 AM

ಬೆಂಗಳೂರು, ಮಾರ್ಚ್​ 08:   ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಏರುತ್ತಿದ್ದಂತೆ ಮಳೆ(Rain)ಯ ಮುನ್ಸೂಚನೆಯೂ ಸಿಕ್ಕಿದೆ. ಮಾರ್ಚ್​ 12ರಿಂದ ಮೂರು ದಿನಗಳ ಕಾಲ ಕರ್ನಾಟಕದ 14ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್​ನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇದೆ.

ಹೊನ್ನಾವರ, ಕಾರವಾರ, ಹಾಸನ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಬೀದರ್​ ಹಾಗೂ ಕೊಪ್ಪಳದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇತ್ತು. ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಅತ್ಯಂತ ಗರಿಷ್ಠ ತಾಪಮಾನ
ಕರ್ನಾಟಕದಾದ್ಯಂತ ಒಣಹವೆ, ಕರಾವಳಿಯಲ್ಲಿ ಉಷ್ಣ ಅಲೆ
Karnataka Weather: ಮುಂದಿನ ಒಂದು ವಾರ ಕರ್ನಾಟಕದ ಕರಾವಳಿಯಲ್ಲಿ ಉಷ್ಣ ಅಲೆ
ದಾವಣಗೆರೆಯಲ್ಲಿ ಅತ್ಯಂತ ಕನಿಷ್ಠ ತಾಪಮಾನ, ಕರ್ನಾಟಕದಾದ್ಯಂತ ಒಣಹವೆ

ಮತ್ತಷ್ಟು ಓದಿ: Karnataka Weather: ಮಲೆನಾಡಿನಲ್ಲಿ ಚಳಿ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ

ಬೀದರ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us