AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಮುಂದಿನ 2 ದಿನಗಳ ಕಾಲ ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ, 6 ಜಿಲ್ಲೆಗಳಲ್ಲಿ ಉಷ್ಣ ಅಲೆ

ಕರ್ನಾಟಕದ ಕೆಲವು ಭಾಗಗಳಲ್ಲಿ ಶಾಖದ ಅಲೆ ಇದ್ದರೆ ಇನ್ನೂ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣ ಅಲೆ ಇರಲಿದೆ.ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.

Karnataka Weather: ಮುಂದಿನ 2 ದಿನಗಳ ಕಾಲ ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ, 6 ಜಿಲ್ಲೆಗಳಲ್ಲಿ ಉಷ್ಣ ಅಲೆ
ಮಳೆ Image Credit source: Storm Water Hawali
ನಯನಾ ರಾಜೀವ್
|

Updated on: Mar 17, 2025 | 7:24 AM

Share

ಬೆಂಗಳೂರು, ಮಾರ್ಚ್​ 17: ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಮಳೆ(Rain)ಯಾಗುವ ಮುನ್ಸೂಚನೆ ಇದ್ದು, 6 ಜಿಲ್ಲೆಗಳಲ್ಲಿ ಉಷ್ಣ ಅಲೆ ಇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣ ಅಲೆ ಇರಲಿದೆ.

ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.

ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆ ಹಾಗೂ ಚಾಮರಾಜನಗರದಲ್ಲಿ 16 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕನಿಷ್ಠ ತಾಪಮಾನವು ಕರಾವಳಿಯಲ್ಲಿ 25-26 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಮುಂದಿನ ವಾರ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ರಾಗಿಯಲ್ಲಿ ಕಲ್ಲು, ಮಣ್ಣು ಮಿಶ್ರಣ ಮಾಡ್ತಿದ್ದ ಘಟಕದ ಮೇಲೆ ದಾಳಿ
ರಾಗಿಯಲ್ಲಿ ಕಲ್ಲು, ಮಣ್ಣು ಮಿಶ್ರಣ ಮಾಡ್ತಿದ್ದ ಘಟಕದ ಮೇಲೆ ದಾಳಿ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ