AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್​ ಅಲರ್ಟ್​, ಧಾರಾಕಾರ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುತ್ತಿದೆ, ಕರ್ನಾಟಕದ ಕರಾವಳಿ ಸೇರಿದಂತೆ 7 ಜಿಲ್ಲೆಗಳಲ್ಲಿ ಜೂನ್ 24ರಿಂದ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್​ ಅಲರ್ಟ್​, ಧಾರಾಕಾರ ಮಳೆಯ ಮುನ್ಸೂಚನೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on: Jun 20, 2024 | 7:35 AM

Share

ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಜೂನ್ 24ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್​ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಬೀದರ್​, ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಾವಣಗೆರೆ, ಪರಶುರಾಂಪುರ, ಹೊನ್ನಾವರ, ಲೋಂಡಾ, ಕೂಡಲಸಂಗಮ, ಚಿಕ್ಕಬಳ್ಳಾಪುರ, ಕುಂದಾಪುರ, ಬೆಳ್ತಂಗಡಿ, ಅಂಕೋಲಾ, ಕೋಟ, ಶಿರಾಲಿ, ಮೂರ್ನಾಡು, ಸಿದ್ದಾಪುರ, ಕಾರ್ಕಳ, ಧರ್ಮಸ್ಥಳ, ಮಾಣಿ, ಮಂಕಿ, ಗೇರುಸೊಪ್ಪ, ಮಹಾಲಿಂಗಪುರ, ಕಮ್ಮರಡಿ, ಗುಬ್ಬಿ, ಆಗುಂಬೆ, ಗೌರಿಬಿದನೂರು, ಭಾಗಮಂಡಲ, ನಾಪೋಕ್ಲು, ಕುಡತಿನಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮುಂಗಾರು ಅಬ್ಬರ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ, ಎಚ್​ಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  ಬೀದರ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ