Karnataka Rains: ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್​ ಅಲರ್ಟ್​, ಧಾರಾಕಾರ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುತ್ತಿದೆ, ಕರ್ನಾಟಕದ ಕರಾವಳಿ ಸೇರಿದಂತೆ 7 ಜಿಲ್ಲೆಗಳಲ್ಲಿ ಜೂನ್ 24ರಿಂದ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್​ ಅಲರ್ಟ್​, ಧಾರಾಕಾರ ಮಳೆಯ ಮುನ್ಸೂಚನೆ
ಮಳೆ
Image Credit source: Hindustan Times

Updated on: Jun 20, 2024 | 7:35 AM

ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಜೂನ್ 24ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್​ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಬೀದರ್​, ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಾವಣಗೆರೆ, ಪರಶುರಾಂಪುರ, ಹೊನ್ನಾವರ, ಲೋಂಡಾ, ಕೂಡಲಸಂಗಮ, ಚಿಕ್ಕಬಳ್ಳಾಪುರ, ಕುಂದಾಪುರ, ಬೆಳ್ತಂಗಡಿ, ಅಂಕೋಲಾ, ಕೋಟ, ಶಿರಾಲಿ, ಮೂರ್ನಾಡು, ಸಿದ್ದಾಪುರ, ಕಾರ್ಕಳ, ಧರ್ಮಸ್ಥಳ, ಮಾಣಿ, ಮಂಕಿ, ಗೇರುಸೊಪ್ಪ, ಮಹಾಲಿಂಗಪುರ, ಕಮ್ಮರಡಿ, ಗುಬ್ಬಿ, ಆಗುಂಬೆ, ಗೌರಿಬಿದನೂರು, ಭಾಗಮಂಡಲ, ನಾಪೋಕ್ಲು, ಕುಡತಿನಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮುಂಗಾರು ಅಬ್ಬರ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ, ಎಚ್​ಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 
ಬೀದರ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us