AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 4 ರಿಂದ 6ರವರೆಗೆ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 4 ರಿಂದ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರಲಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 4 ರಿಂದ 6ರವರೆಗೆ ಮಳೆ
ಮಳೆImage Credit source: The News Minute
ನಯನಾ ರಾಜೀವ್
|

Updated on: Dec 31, 2023 | 7:43 AM

Share

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 4 ರಿಂದ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರಲಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಕ್ರಮೇಣ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5.0 ಡಿಗ್ರಿ ಸೆಲ್ಸಿಯಸ್‌ ವರೆಗೆ ಹೆಚ್ಚಳ ಕಂಡಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ

ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!