ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 4 ರಿಂದ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರಲಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಕ್ರಮೇಣ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5.0 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳ ಕಂಡಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ
ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ