Karnataka Weather: ಮಲೆನಾಡಿನಲ್ಲಿ ದಟ್ಟ ಮಂಜು, ಕರಾವಳಿಯಲ್ಲಿ ಉಷ್ಣ ಅಲೆ

ಕರ್ನಾಟಕದ ಕರಾವಳಿಯಲ್ಲಿ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡಿನಲ್ಲಿ ದಟ್ಟ ಮಂಜು ಕವಿದಿದ್ದರೆ, ಕರಾವಳಿಯಲ್ಲಿ ಉಷ್ಣ ಅಲೆ ಬೀಸುತ್ತಿದೆ. ಬಾಗಲಕೋಟೆ, ಧಾರವಾಡ, ಬೀದರ್, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

Karnataka Weather: ಮಲೆನಾಡಿನಲ್ಲಿ ದಟ್ಟ ಮಂಜು, ಕರಾವಳಿಯಲ್ಲಿ ಉಷ್ಣ ಅಲೆ
ಬೇಸಿಗೆ
Image Credit source: Business Today

Updated on: Mar 04, 2025 | 7:20 AM

ಕರ್ನಾಟಕದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಇಲ್ಲದಿದ್ದರೂ ಗರಿಷ್ಠ, ಕನಿಷ್ಠ ಉಷ್ಣಾಂಶದಲ್ಲಿ ಬದಲಾವಣೆಗಳಾಗುತ್ತಿವೆ. ಮಲೆನಾಡಿನಲ್ಲಿ ದಟ್ಟ ಮಂಜು ಕವಿದಿದ್ದರೆ, ಕರಾವಳಿಯಲ್ಲಿ ಉಷ್ಣ ಅಲೆ ಬೀಸುತ್ತಿದೆ. ಬಾಗಲಕೋಟೆ, ಧಾರವಾಡ, ಬೀದರ್, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 16.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಅತ್ಯಂತ ಗರಿಷ್ಠ ತಾಪಮಾನ

ಗದಗದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us