AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಹಾಸನ, ಕೊಡಗು ಸೇರಿ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ಮುಂದಿನ ಎರಡು ದಿನಗಳ ಕಾಲ ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಧಗೆ ಹೆಚ್ಚಾಗಿದ್ದು, ರಾಜ್ಯಾದ್ಯಂತ ಹಲವೆಡೆ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ.

Karnataka Weather: ಹಾಸನ, ಕೊಡಗು ಸೇರಿ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ
ಮಳೆImage Credit source: Jagran
ನಯನಾ ರಾಜೀವ್
|

Updated on: Mar 24, 2024 | 7:52 AM

Share

ಹಾಸನ, ಕೊಡಗು ಸೇರಿದಂತೆ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡದ ಪಣಂಬೂರಿನಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 20.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಇಂದು ಕೊಡಗು, ಮೈಸೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಹೊನ್ನಾವರದಲ್ಲಿ33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್