AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಎಲ್ಲೆಡೆ ಬಿಸಿಲ ತಾಪ ಹೆಚ್ಚಾಗಿದೆ. ಸರಗೂರು ಹಾಗೂ ಎಚ್​ಡಿ ಕೋಟೆಯಲ್ಲಿ ಮಳೆಯಾಗಿದೆ. ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಒಣಹವೆ ಮುಂದುವರೆಯಲಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ
ಮಳೆ Image Credit source: PTI
ನಯನಾ ರಾಜೀವ್
|

Updated on: Mar 18, 2025 | 7:19 AM

Share

ಬೆಂಗಳೂರು, ಮಾರ್ಚ್​ 18: ಕರ್ನಾಟಕದಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೆಲವೇ ಕೆಲವು ಕಡೆ ಮಳೆಯಾಗಿದೆ. ಈ ಮಳೆಯ ಬಳಿಕ ಆ ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಮುಂದಿನ ಒಂದೆರಡು ದಿನಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಿರಲಿದೆ. ಸುರಗೂರು, ಎಚ್​ಡಿಕೋಟೆಯಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿ, ವಿಜಯಪುರ, ಧಾರವಾಡದಲ್ಲಿ 18 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಕರ್ನಾಟಕದಲ್ಲಿ ಗರಿಷ್ಠ ಉಷ್ಣಾಂಶ 2-4 ಡಿಗ್ರಿ ಸೆಲ್ಸಿಯಸ್​ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಮುಂದಿನ 2 ದಿನಗಳ ಕಾಲ ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ, 6 ಜಿಲ್ಲೆಗಳಲ್ಲಿ ಉಷ್ಣ ಅಲೆ

ಧಾರವಾಡದಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More