Karnataka Weather: ಕರ್ನಾಟಕದಾದ್ಯಂತ ಶೀತಗಾಳಿ, 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆ

ಕರ್ನಾಟಕದಾದ್ಯಂತ ಶೀತಗಾಳಿ ಬೀಸುತ್ತಿದೆ, ಮಂಗಳವಾರ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 5-6 ದಿನಗಳ ಕಾಲ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7ರಿಂದ 9ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕದಾದ್ಯಂತ ಶೀತಗಾಳಿ, 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆ
ಮಳೆImage Credit source: Business Standard
Follow us
ನಯನಾ ರಾಜೀವ್
|

Updated on: Jan 03, 2024 | 7:26 AM

ಕರ್ನಾಟಕದಾದ್ಯಂತ ಶೀತಗಾಳಿ ಬೀಸುತ್ತಿದೆ, ಮಂಗಳವಾರ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 5-6 ದಿನಗಳ ಕಾಲ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7ರಿಂದ 9ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ,ವಿಜಯನಗರದಲ್ಲಿ ಜನವರಿ 6 ರಿಂದ 3 ದಿನಗಳ ಕಾಲ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Weather: ಒಂದೆಡೆ ಚಳಿ, ಬೆಂಗಳೂರು ಸೇರಿದಂತೆ ಹಲವೆಡೆ ಜನವರಿ 8ರವರೆಗೆ ಮಳೆ ಸಾಧ್ಯತೆ

ರಾಜ್ಯಾದ್ಯಂತ ಮಂಗಳವಾರ ಒಣಹವೆ ಇತ್ತು. ವಿಜಯಪುರದಲ್ಲಿ 11.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

ಬೆಂಗಳೂರಿನಲ್ಲಿ ಶೀತಗಾಳಿಯಿದ್ದು, ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 28 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರು: 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಶಿವಮೊಗ್ಗ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ. ಬೆಳಗಾವಿ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ , 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಮೈಸೂರು: 31ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ