AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Updates: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Karnataka Weather Updates: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on: Mar 24, 2023 | 7:34 AM

Share

ಮುಖ್ಯಾಂಶಗಳು

  • ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ
  • ಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಕರ್ನಾಟಕದ ಒಳನಾಡಿನ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
  • ಕ್ಕಬಳ್ಳಾಪುರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್​ ಇರಲಿದೆ.

ಮತ್ತಷ್ಟು ಓದಿ: Summer: ಬೇಸಿಗೆಯ ಬಿಸಿ ಗಾಳಿ ಎದುರಿಸಲು ಸಿದ್ಧತೆ; ಪರಿಶೀಲನೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಕರ್ನಾಟಕದ ಒಳನಾಡಿನ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 24-26 ರಿಂದ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ