ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮತ್ತಷ್ಟು ಓದಿ: Summer: ಬೇಸಿಗೆಯ ಬಿಸಿ ಗಾಳಿ ಎದುರಿಸಲು ಸಿದ್ಧತೆ; ಪರಿಶೀಲನೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ
ಎಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಕರ್ನಾಟಕದ ಒಳನಾಡಿನ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 24-26 ರಿಂದ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ