Karnataka Rains: ಕರ್ನಾಟಕದಾದ್ಯಂತ ಕಡಿಮೆಯಾದ ಮುಂಗಾರು ಅಬ್ಬರ, ಇಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ನೈಋತ್ಯ ಮುಂಗಾರು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ದುರ್ಬಲವಾಗಿತ್ತು, ನಿನ್ನೆಯಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು, ಮಲೆನಾಡಿನಲ್ಲೂ ಬಿಸಿಲು ಶುರುವಾಗಿದೆ. ಮುಂದಿನ ಒಂದು ವಾರಗಳ ಕಾಲ ಆಗೊಮ್ಮೆ ಈಗೊಮ್ಮೆ ಮಳೆಯಾಗುವುದ ಬಿಟ್ಟರೆ ಹೆಚ್ಚು ಮಳೆಯಾಗುವ ಯಾವುದೇ ಸೂಚನೆಗಳಿಲ್ಲ.

Karnataka Rains: ಕರ್ನಾಟಕದಾದ್ಯಂತ ಕಡಿಮೆಯಾದ ಮುಂಗಾರು ಅಬ್ಬರ, ಇಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Follow us
|

Updated on:Jun 16, 2024 | 7:59 AM

ಕರ್ನಾಟಕದಲ್ಲಿ ಮುಂಗಾರು ಅಬ್ಬರ ಕಡಿಮೆಯಾಗಿದ್ದು, ಇಂದು ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬರುಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಗಬ್ಬೂರು, ಉಡುಪಿ, ಶೋರಾಪುರ, ಸೈದಾಪುರ, ಅಂಕೋಲಾ, ಗೋಕರ್ಣ, ಕುಮಟಾ, ಕೆಂಭಾವಿ, ಮುದಗಲ್, ಮಂಠಾಳ, ಕಾರ್ಕಳ, ಮಂಕಿ, ಯಲ್ಲಾಪುರ, ದೇವದುರ್ಗ, ದೇವದುರ್ಗ, ಕಕ್ಕೇರಿ, ಕಮಲಾಪುರ, ಮಾನ್ವಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಉಡುಪಿ, ಉತ್ತರಕನ್ನಡ ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯ ಮುನ್ಸೂಚನೆ

ಹೊನ್ನಾವರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:57 am, Sun, 16 June 24

ತಾಜಾ ಸುದ್ದಿ