Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. ಬೀದರ್​ನಲ್ಲಿ 15.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಆರವಾರದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬಾಗಲಕೋಟೆ, ಬೆಂಗಳೂರು, ಹಾಸನ, ಚಿಂತಾಮಣಿಯಲ್ಲಿ ಕೂಡ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು.

Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಮಳೆ
Image Credit source: PTI

Updated on: Feb 24, 2025 | 7:23 AM

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುವು ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ.

ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಬೀದರ್​ನಲ್ಲಿ 15.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಆರವಾರದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬಾಗಲಕೋಟೆ, ಬೆಂಗಳೂರು, ಹಾಸನ, ಚಿಂತಾಮಣಿಯಲ್ಲಿ ಕೂಡ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು.

ಮತ್ತಷ್ಟು ಓದಿ: Karnataka Weather: ಚಂಡಮಾರುತ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ವಿಜಯಪುರದಲ್ಲಿ ಕನಿಷ್ಠ ತಾಪಮಾನದಲ್ಲಿ -2.6 ಡಿಗ್ರಿ ಸೆಲ್ಸಿಯಸ್​ನಷ್ಟು ಕುಸಿತ ಕಂಡಿದೆ. ಗರಿಷ್ಠತಾಪಮಾನವು ಕರಾವಳಿಯಲ್ಲಿ 34-36, ಬೀದರ್, ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಹಾವೇರಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್, ಕಲಬುರಗಿ, ಬಾಗಲಕೋಟೆಯಲ್ಲಿ 36-38 ಡಿಗ್ರಿ ಸೆಲ್ಸಿಯಸ್, ಚಿಂತಾಮಣಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ ಮತ್ತು ಮಡಿಕೇರಿಯಲ್ಲಿ 32-35 ವ್ಯಾಪ್ತಿಯಲ್ಲಿದೆ. ಕನಿಷ್ಠ ತಾಪಮಾನ ಕರಾವಳಿಯಲ್ಲಿ 25-26 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಬೀದರ್, ವಿಜಯಪುಯರ ಮತ್ತು ಗದಗದಲ್ಲಿ 15-18 ಡಿಗ್ರಿ ಸೆಲ್ಸಿಯಸ್​ ಇದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ. ಎಚ್​ಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿನ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us