Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ, ಬೆಂಗಳೂರು ಹವಾಮಾನ ಹೇಗಿರಲಿದೆ?

ಕರ್ನಾಟಕದಾದ್ಯಂತ ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಕೂಡ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ, ಬೆಂಗಳೂರು ಹವಾಮಾನ ಹೇಗಿರಲಿದೆ?
ಮಳೆ
Image Credit source: PTI
Updated By: ನಯನಾ ರಾಜೀವ್

Updated on: Apr 23, 2025 | 7:19 AM

ಬೆಂಗಳೂರು, ಏಪ್ರಿಲ್ 23: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಕೂಡ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಬೇಲೂರು, ತಿಪಟೂರು, ಬೆಳ್ತಂಗಡಿ, ಕೆಂಭಾವಿ, ಧಾರವಾಡ, ಯಡ್ರಾಮಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಚಂಡಮಾರುತದಿಂದಾಗಿ ಕರ್ನಾಟಕ, ಛತ್ತೀಸ್​ಗಢ, ತೆಲಂಗಾಣ, ತಮಿಳುನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರೊಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರಿನ ಹಲವಡೆ ಜೋರು ಮಳೆ: ವಾಹನ ಸವಾರರಿಗೆ ಟ್ರಾಫಿಕ್​ ಪೊಲೀಸರ ಎಚ್ಚರಿಕೆ

ಬೆಳಗಾವಿ ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ