Karnataka Weather: ಕರ್ನಾಟಕದಾದ್ಯಂತ ಒಣಹವೆ, ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಕೋಲಾರ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಬೀದರ್​ನಲ್ಲಿ ಒಣಹವೆ ಮುಂದುವರೆದಿದೆ.ಕಲಬುರಗಿಯಲ್ಲಿ 42.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಕರಾವಳಿ ಹಾಗೂ ದಕ್ಷಿಣ, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.

Karnataka Weather: ಕರ್ನಾಟಕದಾದ್ಯಂತ ಒಣಹವೆ, ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆ
ಮಳೆ
Image Credit source: PTI

Updated on: Apr 24, 2025 | 7:27 AM

ಬೆಂಗಳೂರು, ಏಪ್ರಿಲ್ 24: ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಶಿವಮೊಗ್ಗ, ರಾಮನಗರ, ಕೋಲಾರ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಬೀದರ್​ನಲ್ಲಿ ಒಣಹವೆ ಮುಂದುವರೆದಿದೆ. ಖಜೂರಿ, ಜೋಯಿಡಾ, ಕ್ಯಾಸಲ್​ರಾಕ್​ನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 42.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಕರಾವಳಿ ಹಾಗೂ ದಕ್ಷಿಣ, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.

ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ, ಬೆಂಗಳೂರು ಹವಾಮಾನ ಹೇಗಿರಲಿದೆ?

ಹೊನ್ನಾವರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 36.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 42.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Thu, 24 April 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us