AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಬಹುತೇಕ ಕಡೆ ಮಂಜು ಮುಸುಕಿದ ವಾತಾವರಣ, ಚಳಿ

ಕರ್ನಾಟಕದ ಬಹುತೇಕ ಕಡೆ ಮಂಜು ಕವಿದ ವಾತಾವರಣವಿದ್ದು, ಚಳಿ ಕೂಡ ಕೊಂಚ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ

Karnataka Weather: ಕರ್ನಾಟಕದ ಬಹುತೇಕ ಕಡೆ ಮಂಜು ಮುಸುಕಿದ ವಾತಾವರಣ, ಚಳಿ
ಚಳಿImage Credit source: The New Indian Express
ನಯನಾ ರಾಜೀವ್
|

Updated on:Jan 16, 2024 | 7:27 AM

Share

ಕರ್ನಾಟಕದ ಬಹುತೇಕ ಕಡೆ ಮಂಜು ಕವಿದ ವಾತಾವರಣವಿದ್ದು, ಚಳಿ ಕೂಡ ಕೊಂಚ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರು ಏರ್​ಪೋರ್ಟ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಸಂಕ್ರಾಂತಿಯಂದು ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಚಳಿ, ಒಣಹವೆ ಮುಂದುವರಿಕೆ

ಮೈಸೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು 10 ಗಂಟೆ ಬಳಿಕ ನಿರ್ಮಲ ಆಕಾಶವಿರಲಿದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 14.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:27 am, Tue, 16 January 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!