Karnataka Weather: ಕರ್ನಾಟಕದ ಬಹುತೇಕ ಕಡೆ ಮಂಜು ಮುಸುಕಿದ ವಾತಾವರಣ, ಚಳಿ

|

Updated on: Jan 16, 2024 | 7:27 AM

ಕರ್ನಾಟಕದ ಬಹುತೇಕ ಕಡೆ ಮಂಜು ಕವಿದ ವಾತಾವರಣವಿದ್ದು, ಚಳಿ ಕೂಡ ಕೊಂಚ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ

Karnataka Weather: ಕರ್ನಾಟಕದ ಬಹುತೇಕ ಕಡೆ ಮಂಜು ಮುಸುಕಿದ ವಾತಾವರಣ, ಚಳಿ
ಚಳಿ
Image Credit source: The New Indian Express
Follow us on

ಕರ್ನಾಟಕದ ಬಹುತೇಕ ಕಡೆ ಮಂಜು ಕವಿದ ವಾತಾವರಣವಿದ್ದು, ಚಳಿ ಕೂಡ ಕೊಂಚ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರು ಏರ್​ಪೋರ್ಟ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಸಂಕ್ರಾಂತಿಯಂದು ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಚಳಿ, ಒಣಹವೆ ಮುಂದುವರಿಕೆ

ಮೈಸೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು 10 ಗಂಟೆ ಬಳಿಕ ನಿರ್ಮಲ ಆಕಾಶವಿರಲಿದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 14.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:27 am, Tue, 16 January 24