Karnataka Weather: ಕರ್ನಾಟಕ ಹವಾಮಾನ, ಹಲವೆಡೆ ಭಾರಿ ಚಳಿ, ಬಹುತೇಕ ಕಡೆ ಇಬ್ಬನಿ ಮೋಡ

ಕರ್ನಾಟಕದ ಬಹುತೇಕ ಕಡೆ ಭಾರಿ ಚಳಿ ಮುಂದುವರೆದಿದೆ, ಜತೆಗೆ ಇಬ್ಬನಿ ಮೋಡವೂ ಕೂಡ ಗೋಚರಿಸಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಬಿಸಿಲಿರಲಿದ್ದು ಒಣಹವೆ ಮುಂದುವರೆಯಲಿದೆ.

Karnataka Weather: ಕರ್ನಾಟಕ ಹವಾಮಾನ, ಹಲವೆಡೆ ಭಾರಿ ಚಳಿ, ಬಹುತೇಕ ಕಡೆ ಇಬ್ಬನಿ ಮೋಡ
ಮಂಜು
Image Credit source: Wikipedia

Updated on: Jan 17, 2024 | 7:32 AM

ಕರ್ನಾಟಕದ ಬಹುತೇಕ ಕಡೆ ಭಾರಿ ಚಳಿ ಮುಂದುವರೆದಿದೆ, ಜತೆಗೆ ಇಬ್ಬನಿ ಮೋಡವೂ ಕೂಡ ಗೋಚರಿಸಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಬಿಸಿಲಿರಲಿದ್ದು ಒಣಹವೆ ಮುಂದುವರೆಯಲಿದೆ.

ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಕಡೆ ಮಂಜು ಮುಸುಕಿದ ವಾತಾವರಣ, ಚಳಿ

ಚಿಕ್ಕಮಗಳೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 31.6 ಡಿಗ್ರಿ ಸೆಲ್ಸಿಯಸ್​​ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮೈಸೂರಿನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 12.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದೆ.

ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us