ಕರ್ನಾಟಕದಾದ್ಯಂತ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ಮಳೆಯಾಗಿದೆ. ಚಳಿ ಕೊಂಚ ಬಿಡುವು ಪಡೆದಿದೆ, ಇಂದು ಮೋಡಗಳ ನಡುವೆಯೇ ಸೂರ್ಯ ಇಣುಕಿದ್ದಾನೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹೆಚ್ಚು ಮಳೆಯಾಗಲಿದೆ.
ವಿಜಯಪುರದಲ್ಲಿ 14.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶಿರಾಲಿ, ಹೊನ್ನಾವರ, ಕುಮಟಾ, ಮಂಕಿ, ಗೋಕರ್ಣ, ಮಾಣಿಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rain: ಮುಂದಿನ 2 ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ