Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಬಿಸಿಲಿನ ತಾಪ ಹೆಚ್ಚಳ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಳವಾಗುತ್ತಿದೆ. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್​ನಷ್ಟು ದಾಖಲಾಗಲಿದೆ.

Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಬಿಸಿಲಿನ ತಾಪ ಹೆಚ್ಚಳ
ಬೇಸಿಗೆ

Updated on: Feb 08, 2024 | 7:46 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಕೆ ವಿಪರೀತವೆನಿಸುವಷ್ಟಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.

ಚಾಮರಾಜನಗರದಲ್ಲಿ 12.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ. 33 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಮಂಡ್ಯದಲ್ಲಿ ಚಳಿ, ಕರ್ನಾಟಕದ ಕರಾವಳಿಯಲ್ಲಿ ಸೆಕೆ ಹೆಚ್ಚಳ

ಬೆಳಗಾವಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಡಿಕೇರಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us