Karnataka Rain: ರಾಜ್ಯಾದ್ಯಂತ ಗರಿಷ್ಠ ಉಷ್ಣಾಂಶ ಏರಿಕೆ, ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ

ಕರ್ನಾಟಕದಾದ್ಯಂತ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಏರಿಕೆ ಕಾಣುತ್ತಿದೆ. ಜತೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Rain: ರಾಜ್ಯಾದ್ಯಂತ ಗರಿಷ್ಠ ಉಷ್ಣಾಂಶ ಏರಿಕೆ, ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ
ಮಳೆ
Image Credit source: Hindustan Times

Updated on: Oct 23, 2023 | 7:38 AM

ಕರ್ನಾಟಕದಾದ್ಯಂತ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಏರಿಕೆ ಕಾಣುತ್ತಿದೆ. ಜತೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಂಗಳೂರು, ಸುಳ್ಯ, ಉಪ್ಪಿನಂಗಡಿ, ಪಣಂಬೂರು, ಮಾಲೂರು, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಶಿರಾಲಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಕಲಬುರ್ಗಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us