AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಾದ್ಯಂತ ಕ್ರಮೇಣವಾಗಿ ಹೆಚ್ಚುತ್ತಿದೆ ಗರಿಷ್ಠ ತಾಪಮಾನ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಮುಂದಿನ ಒಂದು ವಾರದೊಳಗೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Karnataka Weather: ಕರ್ನಾಟಕದಾದ್ಯಂತ ಕ್ರಮೇಣವಾಗಿ ಹೆಚ್ಚುತ್ತಿದೆ ಗರಿಷ್ಠ ತಾಪಮಾನ
ಸೆಕೆImage Credit source: PTI
ನಯನಾ ರಾಜೀವ್
|

Updated on: Feb 05, 2025 | 7:24 AM

Share

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗುತ್ತಿದ್ದು, ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡುಬರುತ್ತಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ದಾವಣಗೆರೆ ಹಾಗೂ ಮೈಸೂರಿನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಒಣಹವೆ ಮುಂದುವರೆಯಲಿದೆ. ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ಎಚ್​ಎಎಲ್​ನಲ್ಲಿ31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಧಾರವಾಡ ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು

ಹೊನ್ನಾವರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬರಬೇಕಿದ್ದ 'ಕೈ' ಶಾಸಕರ ಪ್ರವಾಸ ರದ್ದು
ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬರಬೇಕಿದ್ದ 'ಕೈ' ಶಾಸಕರ ಪ್ರವಾಸ ರದ್ದು
ಹೆಜ್ಜೇನು ದಾಳಿಗೆ ಶಾಲೆಯ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಹೆಜ್ಜೇನು ದಾಳಿಗೆ ಶಾಲೆಯ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು
ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ: ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ: ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ
ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ
ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ
ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ