Karnataka Weather: ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ ಅತ್ಯಂತ ಗರಿಷ್ಠ ತಾಪಮಾನ ದಾಖಲು
ಕರ್ನಾಟಕದಲ್ಲಿ ದಿನೇ ದಿನೇ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ, ಹಲವೆಡೆ ಮೋಡಕವಿದ ವಾತಾವರಣವಿದ್ದರೂ ಸೆಕೆಯೂ ಜೋರಾಗಿದೆ. ಈ ಬಾರಿ ರಾಜ್ಯದಲ್ಲಿ ಮಳೆ ಹಾಗೂ ಚಳಿ ಹೆಚ್ಚಿನ ಪ್ರಮಾಣದಲ್ಲಿ ಆಗಿಲ್ಲ, ಆದರೆ ಸೆಕೆ ಮಾರ್ಚ್ ಹಾಗೂ ಏಪ್ರಿಲ್ ವೇಳೆಗೆ ತೀರಾ ಹೆಚ್ಚಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ವಿಳಂಬವಾದರೆ ಕುಡಿಯಲು ನೀರಿರದ ಪರಿಸ್ಥಿತಿ ನಿರ್ಮಾಣವಾಗಬಹುದು ಎನ್ನುವ ಭಯ ಕಾಡುತ್ತಿದೆ. ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದೆಲ್ಲೆಡೆ ಸೆಕೆ ಮುಂದುವರೆದಿದೆ, ಬೆಂಗಳೂರು ಸೇರಿದಂತೆ ಕೆಲವು ಕಡೆಗಳಲ್ಲಿ ಮೋಡಕವಿದ ವಾತಾವರಣವಿತ್ತು. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಮಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆಯಲಿದೆ.
ರಾಜ್ಯದ ಒಂದೆರಡು ಕಡೆ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ವಿಜಯಪುರದಲ್ಲಿ 14.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾದರೆ, ಕಲಬುರಗಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದೆ.
ಎಚ್ಎಎಲ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: India Weather: ದೆಹಲಿ, ಪಂಜಾಬ್, ಬಿಹಾರದಲ್ಲಿ ಮುಂದಿನ 2 ದಿನ ಸುರಿಯಲಿದೆ ಭಾರಿ ಮಳೆ, ಆರೆಂಜ್ ಅಲರ್ಟ್
ಹೊನ್ನಾವರದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿ ಏರ್ಪೋರ್ಟ್ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೊಪ್ಪಳದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 20.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ