ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.
ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ ಕೊಂಚ ಹೆಚ್ಚಾಗಲಿದೆ. ಎಚ್ಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚಳಿ ಕೊಂಚ ಕಡಿಮೆ, ಒಣಹವೆ ಮುಂದುವರಿಕೆ
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 14.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರು ಏರ್ಪೋರ್ಟ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ