Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 2 ದಿನಗಳಲ್ಲಿ ಹೆಚ್ಚಲಿದೆ ಸೆಕೆ

ಕರ್ನಾಟಕದಲ್ಲಿ ಮುಂದಿನ ಒಂದೆರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.

Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 2 ದಿನಗಳಲ್ಲಿ ಹೆಚ್ಚಲಿದೆ ಸೆಕೆ
Image Credit source: Karnataka Tourism

Updated on: Feb 06, 2024 | 7:34 AM

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಸೆಕೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.

ಚಾಮರಾಜನಗರದಲ್ಲಿ 14.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಹವಾಮಾನದಲ್ಲಿ ಏಕಾಏಕಿ ಬದಲಾವಣೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ

ಬೆಳಗಾವಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us